ಬಂಟ್ವಾಳ: “ಜ್ಞಾನದ ಬೆಳಕು ಜಗತ್ತಿನ ಬೆಳಕು” ಎಂದು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಶಿಕ್ಷಣದ ಮೂಲಕ ಅಜ್ಞಾನ, ಅಂಧಕಾರ ಮತ್ತು ಅಸಮಾನತೆಯನ್ನು ದೂರ ಮಾಡುವ ಮಾರ್ಗವನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ. ಜ್ಞಾನದಿಂದ ವ್ಯಕ್ತಿಯ ಉನ್ನತಿಯೊಂದಿಗೆ ಸಮಾಜದ ಪ್ರಗತಿಯೂ ಸಾಧ್ಯವಾಗುತ್ತದೆ.

ಹೀಗಾಗಿ ನಾರಾಯಣ ಗುರುಗಳ ಜ್ಞಾನ ಮತ್ತು ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ ಕುಂಪಲ ಹೇಳಿದರು.

ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ ಆಗಸ್ಟ್ 27ರಂದು ಗುರುವಾರ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ‘ಗುರುತತ್ವವಾಹಿನಿ’ ಮಾಲಿಕೆ–75 ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕಾರ್ಯದರ್ಶಿ ಗೀತಾ ಜಗದೀಶ್, ಕೋಶಾಧಿಕಾರಿ ಪ್ರಜಿತ್ ಅಮೀನ್, ನಿರ್ದೇಶಕರಾದ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಯೋಗೀಶ್ ಪೂಜಾರಿ ಕಲ್ಲಡ್ಕ, ನವೀನ್ ಕಾರಜೆ, ಜಗನಾಥ್ ಕಲ್ಲಡ್ಕ, ಸುನೀತಾ ಮಾರ್ನಬೈಲು ಉಪಸ್ಥಿತರಿದ್ದರು.

ಸದಸ್ಯರಾದ ಪ್ರಶಾಂತ್ ಏರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ಉದಯ್ ಮೇನಾಡ್, ಅಶ್ವಿನ್ ಕಾರಜೆ, ಚಿಂತನ್ ರಾಜ್, ಸುದೀಪ್ ರಾಯಿ, ಶೃಜನಿ ಹಾಗೂ ಪ್ರಶಾಂತ್ ಪೂಜಾರಿ ಕೊಟ್ಟಾರಿಪಾಲು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ಜಗದೀಶ್ ಕಾರಜೆ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ. ಹಾಗೂ ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಭಜನಾ ಅಧ್ಯಕ್ಷ ಪ್ರವೀಣ್ ಪೂಜಾರಿ, ಮಂದಿರದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ನಡೆದ ಭಜನಾ ಸಂಕೀರ್ತನೆಯಲ್ಲಿ ಪ್ರೇರಣಾ ದೇರಾಜೆ, ಸಾತ್ವಿಕ್ ದೇರಾಜೆ ಹಾಗೂ ಗಗನ್ ಕಂದೂರು ಸಂಗೀತ ಸೇವೆ ಸಲ್ಲಿಸಿದರು.

ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರ, ಸಜೀಪ ಮೂಡ–ಸುಭಾಷ್ ನಗರ ಇದರ ಅಧ್ಯಕ್ಷ ಮೋಹನ್ ದಾಸ್ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ವಂದಿಸಿದರು.
ಯುವವಾಹಿನಿ (ರಿ.) ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ ಕಾರ್ಯಕ್ರಮ ನಿರೂಪಿಸಿದರು.





