Breaking
14 Oct 2026, Wed

ಕಲ್ಲಡ್ಕ: ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇಲ್ಲಿ ಕಲ್ಲಡ್ಕ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಿತು.

ಪಂದ್ಯಾಟವನ್ನು ನರಿಕೊಂಬು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆಯಲ್ಲಿ ಶಿಸ್ತು ಅತ್ಯಂತ ಮಹತ್ವದ್ದಾಗಿದ್ದು, ಕ್ರೀಡಾಪಟುಗಳು ಕ್ರೀಡಾಕೂಟದ ನೀತಿ-ನಿಯಮಗಳಿಗೆ ಬದ್ಧರಾಗಿ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ಹೇಳಿದರು.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹೇಮಚಂದ್ರ ಶಂಭೂರು ಭಂಡಾರದ ಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಇಂದುಶೇಖರ್, ಕೆದಿಲ ಗಡಿಯಾರ ಕ್ಲಸ್ಟರ್‌ನ ಸಿಆರ್‌ಪಿ ಸುಧಾಕರ ಭಟ್, ಕಲ್ಲಡ್ಕ ವಲಯದ ಪಂದ್ಯಾಟಗಳ ನೋಡಲ್ ಅಧಿಕಾರಿ ಜಗದೀಶ್ ಬಾಳ್ತಿಲ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ರಾಜೇಶ್ ಶಾಂತಿಲ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ ವಿ. ಕಲ್ಲಡ್ಕ ಹಾಗೂ ಮುಖ್ಯೋಪಾಧ್ಯಾಯ ಜಯರಾಮ ಡಿ. ಪಡ್ರೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *