Breaking
14 Oct 2026, Wed

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಅವರು ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆಗಸ್ಟ್ 20ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಸುನಿಲ್ ಅವರು ಮನೆಗೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಟೆಂಪೊ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಪಘಾತದಲ್ಲಿ ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದರಿಂದ ಕಳೆದ ಎಂಟು ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಓರ್ವ ಸಹೋದರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *