ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ, ಮಹಿಳಾ ಘಟಕ ಹಾಗೂ ಸೇವಾದಳದ ಆಶ್ರಯದಲ್ಲಿ 25ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆಯು ಆಗಸ್ಟ್ 28ರಂದು ಬಿ.ಸಿ.ರೋಡ್ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನೆರವೇರಿತು.

ಸಂಜೆ 4 ಗಂಟೆಗೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಮಹಿಳಾ ಘಟಕದ ಸದಸ್ಯರು, ಸೇವಾದಳದ ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದರು.

ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಅಂಗವಾಗಿ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀ ವರಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾದರು.





