Breaking
29 Aug 2026, Sat

ದ ಕ ಜಿ ಪಂ ಹಿ ಪ್ರಾ ಶಾಲೆ ಕಡೇಶಿವಾಲಯ 14 ವರ್ಷದೊಳಗಿನ ಬಾಲಕರ ವಾಲಿಬಾಲ್ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಕಲ್ಲಡ್ಕ : ದ ಕ ಜಿ ಪಂ ಹಿ ಪ್ರಾ ಶಾಲೆ ಕಡೇಶಿವಾಲಯದ 14 ವರ್ಷದೊಳಗಿನ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ಇದರ ವತಿಯಿಂದ ದಿನಾಂಕ 27-08-2026 ರಂದು ದ ಕ ಜಿ ಪಂ ಹಿ ಪ್ರಾ ಶಾಲೆ ಶಂಭೂರು ಇಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ 14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕಡೇಶಿವಾಲಯದ ಶಾಲಾಭಿವೃದ್ಧಿ ಸಮಿತಿ, ಆಂಗ್ಲ ಮಾಧ್ಯಮ ವಿದ್ಯಾ ವರ್ಧಕ ಸಂಘ, ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರ ವೃಂದದಿಂದ ಶಾಲಾ ಪ್ರಾರ್ಥನಾ ಸಮಯದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *