Breaking
29 Aug 2026, Sat

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು: ಕಜೆಕಾರು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

ಪುಂಜಾಲಕಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು, ಪುಂಜಾಲಕಟ್ಟೆ ವಲಯದ ಕಜೆಕಾರು-ಮಾಡಪಲ್ಕೆ ಹಾಗೂ ಕರ್ಲ-ತೆಂಕ ಕಜೆಕಾರು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮವು ಆಗಸ್ಟ್ 28ರಂದು ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ನಡೆದ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮುಕ್ತೇಸರ ಕೆ. ಯಶೋಧರ ಪೂಜಾರಿ ವಹಿಸಿದ್ದರು.


ದೇವಸ್ಥಾನ ಸಮಿತಿಯ ಅಧ್ಯಕ್ಷ ಗುಣಶೇಖರ್ ಕೊಡಂಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಿಕವರಿ ಯೋಜನಾಧಿಕಾರಿ ಸುನೀತಾ, ತಾಲೂಕು ಯೋಜನಾಧಿಕಾರಿ ಜಯಾನಂದ್ ಪಿ., ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿಕಯ್ಯ ಬಂಗೇರ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಯಶವಂತ ಕೊದ್ಯೆಲ್, ಮಹೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷೆ ಸುನೀತಾ, ಶ್ರೀ ಮಹಾದೇವ ದೇವೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಕುಲಾಲ್ ಹಾಗೂ ದೇವಸ್ಥಾನ ಸಮಿತಿ ಉಪಾಧ್ಯಕ್ಷ ಪ್ರವೀಣ್ ಅಬುರ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಎರಡು ಒಕ್ಕೂಟಗಳ ನಿಕಟಪೂರ್ವ ಪದಾಧಿಕಾರಿಗಳು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಸ್ತಾಂತರಿಸಿದರು. ಯೋಜನೆಯ ಮೂಲಕ ಅಭಿವೃದ್ಧಿ ಹೊಂದಿದ ಸೋಮಶೇಖರ್ ಕೊಡಂಗೆ ಹಾಗೂ ಲಕ್ಷ್ಮಣ ಮೂಲ್ಯ ದೇವೋಟ್ಟು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.


ವಲಯ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿದರು. ಸೇವಾಪ್ರತಿನಿಧಿ ಸುಧಾ ರೈ ವಂದಿಸಿದರು. ಪ್ರಕಾಶ್ ಕರ್ಲ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿಗಳಾದ ಉಷಾ, ಭವ್ಯ ಹಾಗೂ ಕುಸುಮ ಸಹಕರಿಸಿದರು.

Leave a Reply

Your email address will not be published. Required fields are marked *