Breaking
29 Aug 2026, Sat

ಬೆಳ್ತಂಗಡಿ: ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮ ಮತ್ತೆ ಬಿಜೆಪಿಗೆ

ಬೆಳ್ತಂಗಡಿ: ಇತ್ತೀಚೆಗೆ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ನೆರಿಯ ಗ್ರಾಮ ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮ ಅವರು ಶಾಸಕ ಹರೀಶ್ ಪೂಂಜಾ ಅವರ ಸಮ್ಮುಖದಲ್ಲಿ ಇಂದು ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ನೆರಿಯ ಶಕ್ತಿಕೇಂದ್ರ ಅಧ್ಯಕ್ಷ ವಿಶ್ವನಾಥ್ ಹಾಗೂ ಬಿಜೆಪಿ ಮುಖಂಡ ಬಾಬು ಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *