Breaking
22 Sep 2026, Tue

ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯ ದೇವಸ್ಥಾನ, ರಾಯಿ-ಕೊಯಿಲ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೊಯಿಲ ಆಯ್ಕೆ

ರಾಯಿ:ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯ ದೇವಸ್ಥಾನ, ಕೊಯಿಲ ರಾಯಿ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೊಯಿಲ ಆಯ್ಕೆಯಾಗಿದ್ದಾರೆ.

ಉದ್ಯಮಿಯಾಗಿರುವ ಇವರು ಸಿದ್ಧಕಟ್ಟೆ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ರಾಯಿ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ, ಸಿದ್ಧಕಟ್ಟೆ ಶಾರಾದೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿ, ಕೊಯಿಲ ದ. ಕ. ಜಿ. ಪ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಹಲವಾರು ಧಾರ್ಮಿಕ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತಿದ್ದು ಇದೀಗ ಬದನಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

Leave a Reply

Your email address will not be published. Required fields are marked *