Breaking
16 Oct 2026, Fri

ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧ ಸಭಾಂಗಣದಲ್ಲಿ ಆಗಸ್ಟ್ 30ರಂದು ನಡೆಯಿತು.


ಬಂಟ್ವಾಳ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮುರಳೀಧರ ಪೊಳಲಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಸಭೆಯನ್ನು ಉದ್ಘಾಟಿಸಿ ಮಾತನಾಡಿ, ನಮ್ಮ ಆಚಾರ-ವಿಚಾರ ಹಾಗೂ ಸಂಸ್ಕಾರಗಳನ್ನು ಉಳಿಸಿ ಬೆಳೆಸುವಲ್ಲಿ ಭಜನೆ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.


ಜಿಲ್ಲಾ ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಅವರು ಧರ್ಮಸ್ಥಳದಲ್ಲಿ ನಡೆಯಲಿರುವ ಭಜನಾ ಕಮ್ಮಟ ಹಾಗೂ ಭಜನೋತ್ಸವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.


ಭಜನಾ ಕಮ್ಮಟದ ತರಬೇತಿದಾರ ಸಂದೇಶ್ ಮದ್ದಡ್ಕ ಅವರು ಬಂಟ್ವಾಳ ತಾಲೂಕಿನ ವಿವಿಧ ಭಜನಾ ಮಂಡಳಿಗಳು ನಡೆಸುತ್ತಿರುವ ಕುಣಿತ ಭಜನೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಸಭೆಯಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.


ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ತಾಲೂಕಿನ ವಿಚಕ್ಷಣಾಧಿಕಾರಿ ಸುಬ್ರಾಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *