ಬಂದಾರು: ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಕಾರ್ಯಕ್ರಮ ಆ.30ರಂದು ನಡೆಯಿತು.


ದೇವರಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪುತ್ತೂರು ಅಂಚೆ ವಿಭಾಗದ ಉಪ ಅಧೀಕ್ಷಕ ಮೋಹನ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ಹೊಸ ಆಧಾರ್ ನೋಂದಣಿ ಹಾಗೂ ಆಧಾರ್‌ನಲ್ಲಿನ ವಿವಿಧ ತಿದ್ದುಪಡಿ ಸೇವೆಗಳ ಪ್ರಯೋಜನ ಪಡೆದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಪ್ರಶಾಂತ್ ನಿರುಂಬುಡ, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಊರ ಹಿರಿಯರಾದ ಶ್ರೀಪತಿ ರಾವ್, ರಘುಪತಿ ಭಟ್, ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಎನ್., ಸಹ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




