ಹೊಕ್ಕಾಡಿಗೋಳಿ: ಸ ಉ ಪ್ರಾ ಶಾಲೆ, ಹೊಕ್ಕಾಡಿಗೋಳಿ ಯಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆಯೊಂದಿಗೆ ನೂತನ ಧ್ವಜ ಸ್ತಂಭದ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು .
ನೂತನ ಧ್ವಜ ಸ್ತಂಭದ ಉದ್ಘಾಟನೆಯನ್ನು ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರವೀಣ್ ಚಂದ್ರ ಜೈನ್ ರವರು ನೆರವೇರಿಸಿದರು. ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಶ್ರೀ ದಿನೇಶ್ ಹುಲಿ ಮೇರು ಇವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಶಾಲಾ ಎಸ್‌ಡಿಎಂಸಿ ನಾಮ ನಿರ್ದೇಶಿತ ಸದಸ್ಯರಾದ ಶ್ರೀಮತಿ ವಿಜಯ ಕುಂಜಾಡಿ ಇವರ ನೇತೃತ್ವದಲ್ಲಿ ಶ್ರೀ ಕೆ ಪ್ರತಾಪ್ ಸಿಂಹ ನಾಯಕ್, ಮಾನ್ಯ ಶಾಸಕರು ಕರ್ನಾಟಕ ವಿಧಾನ ಪರಿಷತ್ ಇವರು ನೂತನ ಧ್ವಜ ಸ್ತಂಭದ ನಿರ್ಮಾಣಕ್ಕೆ ರೂಪಾಯಿ 1 ಲಕ್ಷ ಅನುದಾನವನ್ನು ಒದಗಿಸಿ ಕೊಟ್ಟಿರುತ್ತಾರೆ.
ಧ್ವಜಸ್ತಂಭದ ನಿರ್ಮಾಣದಲ್ಲಿ ಸಂಪೂರ್ಣವಾಗಿ ಸಹಕರಿಸಿದ ಶ್ರೀಮತಿ ವಿಜಯ ಕುಂಜಾಡಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಥ ಸಂಚಲನ ಹಾಗೂ ಸಾಮೂಹಿಕ ಕವಾಯತು ಪ್ರದರ್ಶಿಸುವುದರೊಂದಿಗೆ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿ ರಾಷ್ಟ್ರೀಯ ಭಾವೈಕ್ಯತಾ ಗೀತೆಯನ್ನು ಹಾಡಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸುರೇಂದ್ರ ಅಜ್ಜಾಡಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಭಟ್, ಪದಾಧಿಕಾರಿಗಳು ಹಾಗೂ ಎಸ್ ಡಿ ಎಂ ಸಿ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ತಾಯಂದಿರ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಪೋಷಕರು ವಿದ್ಯಾಭಿಮಾನಿಗಳು,ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮಿತ್ರ ಎಸ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸುಚಿತ್ರ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೆಟಿಲ್ಡ ಡಿಸೋಜ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರಾದ ಶ್ರೀಮತಿ ಸಿಲ್ವಿಯ ಮಿರಾಂದ, ಶ್ರೀಮತಿ ಶುಭವತಿ,ಕುಮಾರಿ ಸುತೀಕ್ಷ, ಕುಮಾರಿ ಪ್ರಮಿಕ್ಷ ಉಪಸ್ಥಿತರಿದ್ದು ಸಹಕರಿಸಿದರು.




