Breaking
1 Sep 2026, Tue

ಬಂಟ್ವಾಳ: ರಾಜ್ಯ ಸ್ಕ್ವಾಯ್ ಚಾಂಪಿಯನ್‌ಶಿಪ್‌ನಲ್ಲಿ ಮಜ್ಲಿಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿಯರ ಸಾಧನೆ

ಬಂಟ್ವಾಳ: ಸ್ಕ್ವಾಯ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸ್ಕ್ವಾಯ್ ಚಾಂಪಿಯನ್‌ಶಿಪ್ ಹಾಗೂ ಸೆಲೆಕ್ಷನ್ ಟ್ರಯಲ್‌ನಲ್ಲಿ ಮಜ್ಲಿಸ್ ಪಬ್ಲಿಕ್ ಸ್ಕೂಲ್, ಗಾಣೆಮಾರ್ ಬಡಕಬೈಲ್‌ನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.

ಶಾಲೆಯ ವಿದ್ಯಾರ್ಥಿನಿ ಆಯಿಷಾ ಇನಾಝ್ ಅವರು ಅಂಡರ್-14 ಓಪನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ. ಈ ಮೂಲಕ ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ಕ್ವಾಯ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದು ಆಯ್ಕೆಯಾಗಿದ್ದಾರೆ.

ಮತ್ತೋರ್ವ ವಿದ್ಯಾರ್ಥಿನಿ ಆಯಿಷಾ ರಿಮಾಸ್ ಅವರು ಅಂಡರ್-14, 45 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ.

ಇಬ್ಬರೂ ವಿದ್ಯಾರ್ಥಿನಿಯರು ಸರ್ಫರಾಜ್ ಅಬ್ದುಲ್ ಖಾದಿರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಮಜ್ಲಿಸ್ ಪಬ್ಲಿಕ್ ಸ್ಕೂಲ್, ಗಾಣೆಮಾರ್ ಬಡಕಬೈಲ್ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.

Leave a Reply

Your email address will not be published. Required fields are marked *