Breaking
1 Sep 2026, Tue

ಬೆಳ್ತಂಗಡಿ: ಸವಣಾಲಿನಲ್ಲಿ ಬೋನಿಗೆ ಬಿದ್ದ ಚಿರತೆ; ಅರಣ್ಯ ಇಲಾಖೆ ಕಾರ್ಯಾಚರಣೆ

ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.

ಹನ್ಯಾಡಿ ಪಲ್ಕೆಯ ಬಾಲಕೃಷ್ಣ ನಾಯ್ಕ ಅವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.

ಚಿರತೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೂ ಕೆಲ ಸಮಯ ಹಿಂದೆ ಇದೇ ಪ್ರದೇಶದ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಎರಡು ಚಿರತೆಗಳು ಸೆರೆಯಾಗಿದ್ದವು.

Leave a Reply

Your email address will not be published. Required fields are marked *