Breaking
16 Oct 2026, Fri

ಓದುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಚೆನ್ನಾಗಿ ಓದುವಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.


ಸೃಷ್ಟಿ (14) ಮೃತಪಟ್ಟ ವಿದ್ಯಾರ್ಥಿನಿ. ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಪೋಷಕರು ಚೆನ್ನಾಗಿ ಓದುವಂತೆ ಪದೇಪದೇ ಬುದ್ಧಿವಾದ ಹೇಳುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದಿದ್ದ ಸೃಷ್ಟಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.


ಘಟನೆ ನಡೆದ ವೇಳೆ ಸೃಷ್ಟಿಯನ್ನು ಮನೆಯಲ್ಲೇ ಬಿಟ್ಟು ತಂದೆ-ತಾಯಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಮುಗಿಸಿ ಮನೆಗೆ ವಾಪಸಾದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎನ್ನಲಾಗಿದೆ.


ಪೋಷಕರು ಓದಿನ ವಿಚಾರವಾಗಿ ಪದೇಪದೇ ಹೇಳುತ್ತಿದ್ದುದೇ ಈ ನಿರ್ಧಾರಕ್ಕೆ ಕಾರಣ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *