ಮೂಡಬಿದ್ರಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆಯು ಆಗಸ್ಟ್ 30, 2026ರಂದು ಮೂಡಬಿದ್ರಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಆಯಿಶತುಲ್ ನಾಫಿಯ ಅವರು 11 ವರ್ಷದೊಳಗಿನ -33 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಈ ಸಾಧನೆಯ ಮೂಲಕ ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಆಯಿಶತುಲ್ ನಾಫಿಯ ಅವರು ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಮೊಹಮ್ಮದ್ ಫಹಾದ್ ಹಾಗೂ ಮಿಶ್ರಿಯ ದಂಪತಿಯ ಪುತ್ರಿಯಾಗಿದ್ದಾರೆ. ಇವರು ತರಬೇತುದಾರ ಸರ್ಫರಾಜ್ ಅವರಿಂದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾರೆ.



