ಮೂಡಬಿದ್ರಿ: ಕರ್ನಾಟಕ ಸ್ಕ್ವೇಯ್ ಸಂಸ್ಥೆಯು ಆಗಸ್ಟ್ 30, 2026ರಂದು ಮೂಡಬಿದ್ರಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಮರಿಯಮ್ ಸುಹ ಅವರು 11 ವರ್ಷದೊಳಗಿನ -18 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಈ ಸಾಧನೆಯ ಮೂಲಕ ಒಡಿಶಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಮರಿಯಮ್ ಸುಹ ಅವರು ಅನುದಾನಿತ ಕಳುವಾರು ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಮುಬಾರಕ್ ಹಾಗೂ ಸಬಿಹಾ ದಂಪತಿಯ ಪುತ್ರಿಯಾಗಿದ್ದಾರೆ. ಇವರು ತರಬೇತುದಾರ ಸರ್ಫರಾಜ್ ಅವರಿಂದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾರೆ.




