Breaking
2 Sep 2026, Wed

ತೊಕ್ಕೊಟ್ಟು ಜಂಕ್ಷನ್‌ನಲ್ಲಿ ರಿಕ್ಷಾ ಢಿಕ್ಕಿ: ಪಾದಚಾರಿಗೆ ಗಾಯ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಕೂಡ ಮಗುಚಿ ಬಿದ್ದಿದೆ.

ಕಾಪಿಕಾಡು ನಿವಾಸಿ ಚಂದ್ರಶೇಖರ್ (62) ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಮಗುಚಿ ಬಿದ್ದ ಪರಿಣಾಮ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *