Breaking
2 Sep 2026, Wed

4 ತಿಂಗಳ ಅವಳಿ ಹೆಣ್ಣು ಮಕ್ಕಳ ಕೊಲೆ ಆರೋಪ; ತಾಯಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ವಾಜರಹಳ್ಳಿಯ ಬಿಸಿಸಿಎಚ್ಎಸ್ ಲೇಔಟ್ನ ಮನೆಯಲ್ಲಿ ನಾಲ್ಕು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೀರು ತುಂಬಿದ್ದ ಬಕೆಟ್ನಲ್ಲಿ ಮುಳುಗಿಸಿ ಕೊಲೆ ಮಾಡಿದ ಆರೋಪದ ಮೇಲೆ ತಾಯಿ ವಿರುದ್ಧ ಪ್ರಕರಣ ದಾಖಲಾಗಿದೆ. ಬಳಿಕ ಮಹಿಳೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಉಮಾದೇವಿ (44) ಕೃತ್ಯ ಎಸಗಿದ ಆರೋಪಿಯಾಗಿದ್ದು, ಪತಿ ರಾಮಲಿಂಗಪ್ಪ ಅವರ ದೂರಿನ ಮೇರೆಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಳೆದ ಕೆಲವು ದಿನಗಳಿಂದ ಉಮಾದೇವಿ ಮಕ್ಕಳ ಆರೈಕೆಯಲ್ಲಿ ಆಸಕ್ತಿ ತೋರದೆ ವಿಚಿತ್ರವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ನಿಮ್ಹಾನ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಮಂಗಳವಾರ ಮಧ್ಯಾಹ್ನ ಮನೆಯ ಕೋಣೆಯ ಬಾಗಿಲು ಹಾಕಿಕೊಂಡಿದ್ದ ಉಮಾದೇವಿ, ಅವಳಿ ಮಕ್ಕಳನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆಗೆ ಯತ್ನಿಸಿರುವುದು ಪತ್ತೆಯಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *