ಕಲ್ಲಡ್ಕ : ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು ಇಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ 14ರ ವಯೋಮಿತಿಯ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವಿರಕಂಭ ಇಲ್ಲಿನ ಬಾಲಕಿಯರ ಕಬ್ಬಡಿ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ವಲಯ ಮಟ್ಟದಲ್ಲಿ ಪ್ರಥಮ ಪ್ರಶಸ್ತಿ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ತಂಡವನ್ನು ಶಾಲಾ ಪ್ರಾರ್ಥನಾ ಸಮಯದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ,, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ದ ಪರವಾಗಿ ಅಭಿನಂದಿಸಲಾಯಿತು.





