ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ‘ದೇಶ ರಕ್ಷಕರೊಂದಿಗೆ ರಕ್ಷಾಬಂಧನ’ ವಿಶೇಷ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಮೋನಪ್ಪ ಪೂಜಾರಿ ಹಾಗೂ ಸುಮತಿ ದಂಪತಿಯನ್ನು ಗೌರವಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ ಡಾ. ಪ್ರಭಾಕರ್ ಭಟ್, ರಾಷ್ಟ್ರ ಸೇವಿಕಾ ಸಮಿತಿಯ ಡಾ. ಕಮಲ ಪ್ರಭಾಕರ್ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ರವಿರಾಜ್ ಕಣಂತೂರು, ಸುಮಂತ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.









