ಸಿದ್ಧಕಟ್ಟೆ: ಯುವ ಫ್ರೆಂಡ್ಸ್ ಸಿದ್ಧಕಟ್ಟೆ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಸೆಪ್ಟೆಂಬರ್ 5ರಂದು ಸಿದ್ಧಕಟ್ಟೆ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಯಿಂದ ಅಂಗನವಾಡಿ ಮಕ್ಕಳು, ಮಹಿಳೆಯರು, ಪುರುಷರು ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ಬೆಳಗ್ಗೆ 9.30ಕ್ಕೆ ವಿಶೇಷವಾಗಿ ಕಂಬ ಹತ್ತುವ ಸ್ಪರ್ಧೆ ಆಯೋಜಿಸಲಾಗಿದೆ.
ಬೆಳಗ್ಗೆ 10ರಿಂದ 11.30ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 11.30ರಿಂದ 12.30ರವರೆಗೆ ಸಂಗೀತ ಸ್ಪರ್ಧೆ (ಭಕ್ತಿಗೀತೆ) ನಡೆಯಲಿದೆ. ಮದ್ಯಾಹ್ನ ಗಂಟೆ 12:30ರಿಂದ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ.

ಇದೇ ಸಂದರ್ಭದಲ್ಲಿ ಬೆಳಗ್ಗೆ 9.30ರಿಂದ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು, ವಿಜೇತ ತಂಡಗಳಿಗೆ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಯುವ ಫ್ರೆಂಡ್ಸ್ ಸಿದ್ಧಕಟ್ಟೆ ಮನವಿ ಮಾಡಿದೆ.




