Breaking
4 Sep 2026, Fri

ಕರ್ತವ್ಯ ಲೋಪ, ಮೇಲಾಧಿಕಾರಿಯೊಂದಿಗೆ ಅಶಿಸ್ತಿನ ವರ್ತನೆ ಆರೋಪ: ಪೊಲೀಸ್ ಕಾನ್ಸ್ಟೆಬಲ್ ಅಮಾನತು

ಬಂಟ್ವಾಳ: ಕರ್ತವ್ಯದಲ್ಲಿ ನಿರ್ಲಕ್ಷ್ಯ ಹಾಗೂ ಮೇಲಾಧಿಕಾರಿಯೊಂದಿಗೆ ಅಶಿಸ್ತಿನ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅರುಣ್ ಚೌಹಾನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅಗತ್ಯ ಜವಾಬ್ದಾರಿ ವಹಿಸದಿರುವುದು, ಕರ್ತವ್ಯದಲ್ಲಿ ಲೋಪ ಹಾಗೂ ನಿರ್ಲಕ್ಷ್ಯ ತೋರಿರುವುದು ಸೇರಿದಂತೆ ಮೇಲಾಧಿಕಾರಿಯೊಂದಿಗೆ ಉದ್ದಟತನದಿಂದ ವರ್ತಿಸಿದ ಆರೋಪಗಳು ಅವರ ವಿರುದ್ಧ ಕೇಳಿಬಂದಿವೆ.


ಈ ಆರೋಪಗಳನ್ನು ಆಧರಿಸಿ ಇಲಾಖಾ ಮಟ್ಟದಲ್ಲಿ ಕ್ರಮ ಕೈಗೊಂಡು ಅಮಾನತು ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಇಲಾಖಾ ನಿಯಮಾನುಸಾರ ವಿಚಾರಣೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಆದಾಗ್ಯೂ, ಇಲಾಖಾ ವಿಚಾರಣೆಯಲ್ಲಿ ಆರೋಪಗಳು ಸಾಬೀತಾಗುವವರೆಗೆ ಅವುಗಳನ್ನು ಆರೋಪಗಳೆಂದೇ ಪರಿಗಣಿಸಬೇಕಾಗಿದೆ.

Leave a Reply

Your email address will not be published. Required fields are marked *