ಪುತ್ತೂರು: ಬಹುಮುಖ ಪ್ರತಿಭೆ ಕೀರ್ತನ್ ಕೆ. ಗಟ್ಟಿಯವರನ್ನು ವಿವಿಧ ಸಂಘಟನೆಗಳ ವತಿಯಿಂದ ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ ಪುತ್ತೂರು, ಹೊಸಬೆಳಕು ಬಡವರ ಆಶಾಕಿರಣ ಆರ್ಲಪದವು (ರಿ.) ಪುತ್ತೂರು, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಕೇಂದ್ರ ಸಮಿತಿ ಬೆಂಗಳೂರು (ರಿ.) ಪುತ್ತೂರು ಘಟಕ ಹಾಗೂ ಶ್ರೀಕೃಷ್ಣ ಯುವಕ ಮಂಡಲ (ರಿ.) ಸಿಟಿಗುಡ್ಡೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆ.1ರಂದು ಕಾರ್ಯಕ್ರಮ ನಡೆಯಿತು.

ಕಬಕ ಗ್ರಾಮದ ವಿದ್ಯಾಪುರ ನಿವಾಸಿಗಳಾದ ಗಣೇಶ್ ಪ್ರಸಾದ್ ಹಾಗೂ ಪ್ರಮೀಳಾ ದಂಪತಿಯ ಪುತ್ರ ಕೀರ್ತನ್ ಕೆ. ಗಟ್ಟಿಯವರು, ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಸ್ಎಸ್ಎಲ್ಸಿಯಲ್ಲಿ ಶೇ.90ಕ್ಕೂ ಅಧಿಕ ಅಂಕ ಗಳಿಸಿದ್ದಾರೆ. ಪ್ರಸ್ತುತ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ 2026’ ಪ್ರಶಸ್ತಿ ಪುರಸ್ಕೃತ ಉಮೇಶ್ ನಾಯಕ್, ಸಾಹಿತಿ ಹಾಗೂ ಪತ್ರಕರ್ತ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಗೌರವಾಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಅಧ್ಯಕ್ಷೆ, ‘ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’ ಪುರಸ್ಕೃತ ಶಿಕ್ಷಕಿ ಡಾ. ಶಾಂತಾ ಪುತ್ತೂರು, ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ನ ಸಮಾಜ ಸೇವಕ ನವೀನ್ ಸಿಟಿಗುಡ್ಡೆ, ಕಿರುತೆರೆ ನಟ ಹಾಗೂ ಕಲಾವಿದ ಕೃಷ್ಣಪ್ಪ, ಅಣ್ಣಪ್ಪ–ಜ್ಯೋತಿ ದಂಪತಿ ಹಾಗೂ ಕಬಕ ಎಸ್ಡಿಎಂಸಿ ಸದಸ್ಯೆ ಪ್ರಮೀಳಾ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನೆಟ್ಲದ ಈಶ್ವರ ಕುಲಾಲ್ ಹಾಗೂ ನಳಿನಾಕ್ಷಿ ದಂಪತಿಯ ಪುತ್ರಿ, ಕಲ್ಲಡ್ಕ ಶ್ರೀರಾಮ ಶಾಲೆಯ ವಿದ್ಯಾರ್ಥಿನಿ ಕಾರುಣ್ಯ ಅವರ ಹುಟ್ಟುಹಬ್ಬವನ್ನು ಸಹ ಆಚರಿಸಲಾಯಿತು.




