Breaking
5 Sep 2026, Sat

ಕುದ್ಕೋಳಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ

ಬಂಟ್ವಾಳ: ಓಂ ಫ್ರೆಂಡ್ಸ್ ಕುದ್ಕೋಳಿ ಯುವಕ ಮಂಡಲ(ರಿ.) ಹಾಗೂ ಮಹಿಳಾ ಸಮಿತಿ ಕುದ್ಕೋಳಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 21ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಯೋಜಿಸಲಾಗಿದೆ.

ಸೆಪ್ಟೆಂಬರ್ 6ರ ಆದಿತ್ಯವಾರದಂದು ಕುದ್ಕೋಳಿ ಕೇಂದ್ರ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಮಧ್ಯಾಹ್ನ 3.30ರಿಂದ ಸಫಲ ಕಾಯಿಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *