Breaking
7 Sep 2026, Mon

ಕಲ್ಲಡ್ಕದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ತುರ್ತು ಕಾರ್ಯಕಾರಿಣಿ ಸಭೆ

ಕಲ್ಲಡ್ಕ: ಬಿಲ್ಲವ ಸಮಾಜ ಸೇವಾ ಸಂಘ (ರಿ.), ಕಲ್ಲಡ್ಕ ವಲಯದ ತುರ್ತು ಕಾರ್ಯಕಾರಿಣಿ ಸಭೆಯು ಸೆ. 6ರಂದು ಪಂಚವಟಿ ವಾಣಿಜ್ಯ ಸಂಕೀರ್ಣದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಸಂಘಕ್ಕೆ ಸ್ವಂತ ನಿವೇಶನ ಖರೀದಿಸುವ ಕುರಿತು ಹಾಗೂ ಸಂಘದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಮನೆ-ಮನೆ ಸಂಪರ್ಕ ಅಭಿಯಾನ ನಡೆಸುವ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ ಹೊಸಕಟ್ಟ, ಕೋಶಾಧಿಕಾರಿ ಕಿಶೋರ್ ಕುಮಾರ್ ಕಟ್ಟೆಮಾರು, ಮಹಿಳಾ ಸಮಿತಿ ಅಧ್ಯಕ್ಷೆ ಲಾವಣ್ಯ ಕುಂಟಿ ಪಾಪು ಹಾಗೂ ಗೌರವಾಧ್ಯಕ್ಷೆ ಸುಧಾ ಸುಧೆಕಾರು ಉಪಸ್ಥಿತರಿದ್ದರು.

ಇದಲ್ಲದೆ ಕಲ್ಲಡ್ಕ ವಲಯ ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ಕಾರ್ಯಕಾರಿಣಿ ಸಮಿತಿ ಸದಸ್ಯರು, ವಿವಿಧ ಗ್ರಾಮ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *