ಬೆಳ್ತಂಗಡಿ: ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸೆ. 7ರಂದು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಪಾಲನಾ ಕೇಂದ್ರದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ, ಅವರ ಕುಶಲೋಪಚಾರಿ ವಿಚಾರಿಸಿದರು. ಅಲ್ಲದೆ, ಪಾಲನಾ ಕೇಂದ್ರದ ಚಟುವಟಿಕೆಗಳಿಗೆ ಸಂಘದ ವತಿಯಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಾಲನಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.








