Breaking
9 Sep 2026, Wed

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಮುಕ್ಕಚೇರಿ ಕಿಲೇರಿಯಾ ನಗರ ನಿವಾಸಿ ಅಶ್ಪಾಕ್ (34) ಬಂಧಿತ ಆರೋಪಿಯಾಗಿದ್ದಾನೆ.

ಅಶ್ಪಾಕ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವು 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು. ಆದರೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು.

ಸೆ. 8ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Leave a Reply

Your email address will not be published. Required fields are marked *