ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ ಸೆ. 9ರಂದು ನಡೆಯಿತು.
ಪಂದ್ಯಾಟವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಪ್ರಮೀಳಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಿಂಧೂರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷೆ ನಿಶಾ ಬನಂದೂರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಪ್ರಭಾಕರ್ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಪ್ರಥಮ ಹಾಗೂ ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ದ್ವಿತೀಯ ಸ್ಥಾನ ಪಡೆದವು. ಬಾಲಕರ ವಿಭಾಗದಲ್ಲಿ ಎಸ್.ಡಿ.ಎಂ. ಸೆಕೆಂಡರಿ ಶಾಲೆ ಉಜಿರೆ ಪ್ರಥಮ ಹಾಗೂ ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ದ್ವಿತೀಯ ಸ್ಥಾನ ಗಳಿಸಿತು.

14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಎಸ್.ಡಿ.ಎಂ. ಜನಾರ್ದನ ಶಾಲೆ ಉಜಿರೆ ಪ್ರಥಮ ಹಾಗೂ ಎಸ್.ಡಿ.ಎಂ. ಸೆಕೆಂಡರಿ ಶಾಲೆ ಉಜಿರೆ ದ್ವಿತೀಯ ಸ್ಥಾನ ಪಡೆದವು. ಬಾಲಕರ ವಿಭಾಗದಲ್ಲಿ ಎಸ್.ಡಿ.ಎಂ. ಸೆಕೆಂಡರಿ ಶಾಲೆ ಉಜಿರೆ ಪ್ರಥಮ ಹಾಗೂ ಎಸ್.ಡಿ.ಎಂ. ಜನಾರ್ದನ ಶಾಲೆ ಉಜಿರೆ ದ್ವಿತೀಯ ಸ್ಥಾನ ಗಳಿಸಿತು.

ಶಿಕ್ಷಕ ಕೃಷ್ಣಾನಂದ ರಾವ್ ಸ್ವಾಗತಿಸಿದರು. ಶಿಕ್ಷಕ ಕಿರಣ್ ವಂದಿಸಿದರು. ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು. ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ವಿಠ್ಠಲ ಬದನಾಜೆ ಹಾಗೂ ವೆಂಕಟೇಶ್ ಗುರುವಾಯನಕೆರೆ ಉಪಸ್ಥಿತರಿದ್ದರು.





