ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ಸೆ. 9ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಶ್ರಮದಾನದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ಗೌರವಾಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಚಂದ್ರಕಲಾ, ಒಕ್ಕೂಟದ ಸದಸ್ಯರು ಹಾಗೂ ಶಾಲಾ ಪೋಷಕ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಅಡಿಕೆ ತೋಟ, ಮೈದಾನ ಹಾಗೂ ಶಾಲಾ ಸುತ್ತಮುತ್ತ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪ ಅವರು ಶ್ರಮದಾನದಲ್ಲಿ ಪಾಲ್ಗೊಂಡು ಸೇವಾ ಕಾರ್ಯ ಯಶಸ್ವಿಗೊಳಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.









