Breaking
11 Sep 2026, Fri

ಏಮಾಜೆ ಶಾಲಾ ಮಕ್ಕಳಿಗೆ ಯುವವಾಹಿನಿ ಮಾಣಿ ಘಟಕದಿಂದ ಉಚಿತ ಸಮವಸ್ತ್ರ ವಿತರಣೆ

ಮಾಣಿ: ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಏಮಾಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು.

ಮಕ್ಕಳ ಮೇಲಿನ ಅಭಿಮಾನ ಹಾಗೂ ಕಾಳಜಿಯಿಂದ ಯುವವಾಹಿನಿ ಮಾಣಿ ಘಟಕದ ಸಂಘಟನಾ ಕಾರ್ಯದರ್ಶಿ ಸುಚಿತ್ ಅಂಚನ್ ಅವರು ಸಮವಸ್ತ್ರಗಳ ವೆಚ್ಚವನ್ನು ಭರಿಸಿ ಸೇವಾ ಕಾರ್ಯಕ್ಕೆ ಆರ್ಥಿಕ ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ, ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕ ರಾಜೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ಮೋಹನ್ ಮುಜಾಲ, ಸುಜೀತ್ ಬಾಕಿಲ ಹಾಗೂ ಸದಸ್ಯರಾದ ನಿಶಾಂತ್ ಮತ್ತು ವಸಂತಿಕೃಷ್ಣಪ್ಪ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ಅವರ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಪರವಾಗಿ ಮುಖ್ಯ ಶಿಕ್ಷಕಿ ಡಾ. ತ್ರಿವೇಣಿ ರಮೇಶ್ ಅವರು ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *