Breaking
12 Sep 2026, Sat

ಬಿಸಿಯೂಟ ಅಡುಗೆ ಸಿಬ್ಬಂದಿಗಳ ಗೌರವಧನ ಶೀಘ್ರ ಬಿಡುಗಡೆಗೆ ಪ್ರಭಾಕರ ಪ್ರಭು ಒತ್ತಾಯ

ಬಂಟ್ವಾಳ: ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಅಡುಗೆ ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿಂದ ಗೌರವಧನ ಬಿಡುಗಡೆಯಾಗದಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಬಿಸಿಯೂಟ ಅಡುಗೆ ಸಿಬ್ಬಂದಿಗಳ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ಅಡುಗೆ ಸಿಬ್ಬಂದಿಗಳಿಗೆ ಗೌರವಧನ ಬಿಡುಗಡೆಯಾಗದೆ ಇರುವುದರಿಂದ, ಗೌರವಧನವನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ಸಿಬ್ಬಂದಿಗಳಿಗೆ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕುಟುಂಬದ ಅಗತ್ಯಗಳನ್ನು ಪೂರೈಸಲು ಅವರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಸಿಯೂಟ ಅಡುಗೆ ಸಿಬ್ಬಂದಿಗಳ ಸಂಕಷ್ಟವನ್ನು ಪರಿಗಣಿಸಿ, ಬಾಕಿ ಇರುವ ಗೌರವಧನವನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರ ಬಿಡುಗಡೆ ಮಾಡುವಂತೆ ಪ್ರಭಾಕರ ಪ್ರಭು ಅವರು ರಾಜ್ಯ ಸರ್ಕಾರದ ಶಿಕ್ಷಕರ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *