ಬೆಳ್ತಂಗಡಿ: ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾ ಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯಗಳ ಗಮಕ ವಾಚನ ಕಾರ್ಯಕ್ರಮ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ.11ರಂದು ನಡೆಯಿತು.

ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ ಅವರು ಗಮಕ ವಾಚನ ನಡೆಸಿದರು. ವಿದ್ಯಾರ್ಥಿನಿಯರಾದ ಸೃಜನ್ಯ ಹಾಗೂ ನೇತ್ರಾವತಿ ಪದ್ಯದ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಿತಿಕ್ಷ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶಿಕ್ಷಕ ಸುಮನ್ ಯು.ಎಸ್. ವಂದಿಸಿದರು.





