Breaking
15 Sep 2026, Tue

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಜಾಗೃತಿ ಕಾರ್ಯಕ್ರಮ

ಬೆಳಾಲು: ವಿದ್ಯಾರ್ಥಿಗಳಲ್ಲಿ ರೇಬೀಸ್ ರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ.12ರಂದು ರೇಬೀಸ್ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಜಿರೆ ವಲಯದ ಪಶು ವೈದ್ಯಕೀಯ ಪರೀಕ್ಷಕ ಸಚಿನ್ ಅವರು ರೇಬೀಸ್ ರೋಗ ಹರಡುವ ಕಾರಣಗಳು ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪಿಪಿಟಿ ಮತ್ತು ವಿಡಿಯೋ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ರೋಗದ ಕುರಿತು ವಿವರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ, ಬೆಳಾಲು ಗ್ರಾಮದ ಪಶುಸಖಿ ಯಶೋಧ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭವಿತ ಕಾರ್ಯಕ್ರಮ ನಿರೂಪಿಸಿದರು.

ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Leave a Reply

Your email address will not be published. Required fields are marked *