Breaking
15 Sep 2026, Tue

ನರಿಕೊಂಬು ದೇವಸ್ಥಾನದಲ್ಲಿ ಗಣೇಶ ಚತುರ್ಥಿ, ತೆನೆ ಹಬ್ಬ; ಅನಾರೋಗ್ಯ ಪೀಡಿತರಿಗೆ ಸಹಾಯಧನ

ಬಂಟ್ವಾಳ: ಪಾಣೆಮಂಗಳೂರು ನರಿಕೊಂಬುವಿನ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಹಾಗೂ ತೆನೆ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಸೆ.13ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಣಯದಂತೆ ಅನಾರೋಗ್ಯದಿಂದ ಬಳಲುತ್ತಿರುವ ಭಕ್ತಾದಿಗಳಿಗೆ ಸಹಾಯಧನ ವಿತರಿಸಲಾಯಿತು. ಫಲಾನುಭವಿಗಳಾದ ರಮೇಶ್ ಬಂಗಲಗುಡ್ಡೆ ಹಾಗೂ ದೇವಪ್ಪ ಪೂಜಾರಿ ಅವರಿಗೆ ತಲಾ ₹10 ಸಾವಿರ ಸಹಾಯಧನವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘುನಾಥ ಸೋಮಾಯಾಜಿ ಅವರು ಸಮಿತಿಯ ಇತರ ಸದಸ್ಯರ ಉಪಸ್ಥಿತಿಯಲ್ಲಿ ಹಸ್ತಾಂತರಿಸಿದರು.

Leave a Reply

Your email address will not be published. Required fields are marked *