Breaking
16 Sep 2026, Wed

6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ ಅಲಿಯಾಸ್ ಸಫಾರಿ ನೌಫಲ್ (34) ಬಂಧಿತ ಆರೋಪಿ.

ಆತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ .ಕ್ರ. 24/2020ರಂತೆ ಕಲಂ 143, 147, 148, 504, 323, 324, 506, 427 r/w 149 ಐಪಿಸಿ ಹಾಗೂ Prevention of Destruction and Loss of Property Actನ ಕಲಂ 2(a) ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಸೆಪ್ಟೆಂಬರ್ 15ರಂದು ಆರೋಪಿ ವಿದೇಶದಿಂದ ಮಂಗಳೂರಿಗೆ ಮರಳುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಕಾರದೊಂದಿಗೆ ಬಂಟ್ವಾಳ ನಗರ ಪೊಲೀಸರು ಆತನನ್ನು ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *