Breaking
17 Sep 2026, Thu

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಬೆಳ್ತಂಗಡಿ: ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಮಾತೃಭಾಷೆಯನ್ನು ಪ್ರೀತಿಸುವುದರೊಂದಿಗೆ ಇತರ ಭಾಷೆಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿನಿ ಮುರ್ಷಿದ ಹಿಂದಿ ದಿವಸ್‌ನ ವಿಶೇಷತೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಸಂಘಟಿಸಿದ ಹಿಂದಿ ಶಿಕ್ಷಕಿ ಐಶ್ವರ್ಯ ಅವರು ಹಿಂದಿ ಭಾಷೆಯ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿ ನಿಶಾನ್ ಸ್ವಾಗತಿಸಿದರು. ಸೃಜನ್ ವಂದಿಸಿದರು. ಶ್ರೇಯ ಹಾಗೂ ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *