Breaking
19 Sep 2026, Sat

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಇಂಜಿನಿಯರ್ಸ್ ದಿನಾಚರಣೆ

ಬೆಳಾಲು: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.14ರಂದು ಇಂಜಿನಿಯರ್ಸ್ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬಳಿಕ ಇಂಜಿನಿಯರ್ಸ್ ದಿನಾಚರಣೆಯ ಕುರಿತ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ದೇಶದ ಅಭಿವೃದ್ಧಿ, ನಿರ್ಮಾಣ ಕ್ಷೇತ್ರ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಿದರು.

ವಿದ್ಯಾರ್ಥಿನಿ ಶರಾವತಿ ಇಂಜಿನಿಯರ್ಸ್ ದಿನದ ವಿಶೇಷತೆ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಜೀವನ ಹಾಗೂ ಸಾಧನೆಗೆ ಸಂಬಂಧಿಸಿದ ವಿಡಿಯೋ ತುಣುಕನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸೃಜನ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *