Breaking
19 Sep 2026, Sat

ನಾಟೆಕಲ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ನಾಟೆಕಲ್: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ನಾಟೆಕಲ್ ಸಮೀಪದ ಪನೀರ್ ಚರ್ಚ್ ಬಳಿಯ ತಿರುವಿನಲ್ಲಿ ಸಂಭವಿಸಿದೆ.

ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಎನ್ನಲಾದ ಚಾಲಕ ಸ್ವಿಫ್ಟ್ ಕಾರಿನಲ್ಲಿ ದೇರಳಕಟ್ಟೆಯಿಂದ ಪನೀರ್ ರಸ್ತೆಯ ಮೂಲಕ ಬೀರಿ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪನೀರ್ ಚರ್ಚ್ ಬಳಿಯ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಪಲ್ಟಿಯಾದ ಕಾರು ಹತ್ತಿರದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತಿದ್ದು, ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಘಟನೆಯ ಬಳಿಕ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *