ಪದ್ಮುಂಜ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೆ.17 ರಂದು ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಸರ್ವಸೇವೆ ಸಲ್ಲಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀರ್ಘಾಯುಷ್ಯ, ಆರೋಗ್ಯ ಹಾಗೂ ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಬಳಿಕ ಪ್ರಸಾದ ವಿತರಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಬಿಜೆಪಿ ಪಕ್ಷದ ಪ್ರಮುಖರು, ಮೋದಿ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



