Breaking
19 Sep 2026, Sat

ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮೋದಿ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ

ಮಾಲಾಡಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಮಾಲಾಡಿ–ಸೋಣಂದೂರು ಶಕ್ತಿ ಕೇಂದ್ರದ ವತಿಯಿಂದ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಲಾಡಿ ಹಾಗೂ ಸೋಣಂದೂರು ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು, ತಾಲೂಕು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ, ಮೋದಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *