ಮೂಲ್ಕಿ: ಹಳೆಯಂಗಡಿಯಿಂದ ಕಿನ್ನಿಗೋಳಿ ಕಡೆಗೆ ತೆರಳುವ ರಸ್ತೆಯಲ್ಲಿ ಲಾರಿಯೊಂದು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದು ನಿಂತ ಪರಿಣಾಮ ಗುರುವಾರ ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

ರಸ್ತೆಯಲ್ಲಿ ಸಂಚರಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಟ್ರಾನ್ಸ್‌ಫಾರ್ಮರ್‌ಗೆ ಹಾನಿಯಾಗಿದ್ದು, ಲಾರಿ ರಸ್ತೆಯಲ್ಲೇ ನಿಂತುಕೊಂಡಿತ್ತು. ಇದರಿಂದ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿ, ವಾಹನಗಳು ನಿಧಾನಗತಿಯಲ್ಲಿ ಸಾಗುವಂತಾಯಿತು.

ವಿದ್ಯುತ್ ಅವಘಡದ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದುರಸ್ತಿ ಕಾರ್ಯ ಕೈಗೊಳ್ಳಲಾಯಿತು. ಬಳಿಕ ಲಾರಿಯನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು.



