Breaking
19 Sep 2026, Sat

ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ದೀಪ ಬೆಳಗಿಸಿ ಪ್ರಾರ್ಥನೆ

ಪದ್ಮುಂಜ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ನಡೆಯುತ್ತಿರುವ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಣಿಯೂರು ಗ್ರಾಮದ ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಸಂಕ್ರಮಣದ ವಿಶೇಷ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀರ್ಘಾಯುಷ್ಯ ಹಾಗೂ ಆರೋಗ್ಯ ಕರುಣಿಸುವಂತೆ ಮತ್ತು ದೇಶವನ್ನು ಮುನ್ನಡೆಸಲು ಶಕ್ತಿ ನೀಡುವಂತೆ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಬಿಜೆಪಿ ಪಕ್ಷದ ಪ್ರಮುಖರು, ಮೋದಿ ಅಭಿಮಾನಿಗಳು, ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *