ಆರಂಬೋಡಿ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಪ್ರಯುಕ್ತ ಆರಂಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀರ್ಘಾಯುಷ್ಯ ಹಾಗೂ ಆರೋಗ್ಯ ಕರುಣಿಸಬೇಕು ಮತ್ತು ದೇಶವನ್ನು ಮುನ್ನಡೆಸಲು ಶಕ್ತಿ ನೀಡಬೇಕು ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಬಳಿಕ ಪ್ರಸಾದ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಮೋದಿ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.









