Breaking
19 Sep 2026, Sat

ಇಂದಬೆಟ್ಟು ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ

ಇಂದಬೆಟ್ಟು: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಮೋದಿ ಅವರ ಆಯುಷ್ಯ, ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ನಡೆದ ಈ ಕಾರ್ಯಕ್ರಮಗಳಲ್ಲಿ ಮೋದಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಬೆದ್ರಬೆಟ್ಟು ಮಹಮ್ಮಾಯಿ ಮಾರಿಗುಡಿ, ಬಂಗಾಡಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಸಹಸ್ರನಾಗಬನ ಕ್ಷೇತ್ರ, ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ, ಬಂಗಾಡಿ ಶಾಂತಿನಾಥ ಸ್ವಾಮಿ ಬಸದಿ, ಶ್ರವಣಗುಂಡ ಕ್ಷೇತ್ರ, ಕಲ್ಲಾಜೆ ಶಾಂತಿನಗರ ಮಹಮ್ಮಾಯಿ ಮಾರಿಗುಡಿ ಹಾಗೂ ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಳ್ಳ ಕಲ್ಲಗುಂಡ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.

Leave a Reply

Your email address will not be published. Required fields are marked *