ಬೆಳಾಲು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರವ್ಯಾಪಿ ನಡೆಯುತ್ತಿರುವ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಾಮೂಹಿಕವಾಗಿ ತುಪ್ಪದ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಿಶೇಷ ಸಂಕ್ರಮಣ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀರ್ಘಾಯುಷ್ಯ ಹಾಗೂ ಆರೋಗ್ಯ ಕರುಣಿಸಬೇಕು ಮತ್ತು ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಬೇಕು ಎಂದು ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಸ್ರಣ್ಣ ಗಿರೀಶ್ ಬಾರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಬಿಜೆಪಿ ಜಿಲ್ಲಾ ಮನ್ ಕೀ ಬಾತ್ ಸಂಯೋಜಕ ಸೀತಾರಾಮ್ ಬಿ.ಎಸ್., ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಪ್ರಮುಖರಾದ ರಂಜಿತ್ ಉಪ್ಪಾರು, ಯಶೋಧರ ಗೌಡ ಅಳಕ್ಕೆದಡ್ಡ, ರಾಜೇಶ್ ಗೌಡ ಪಾರಳ, ದಿನೇಶ್ ದರ್ಖಾಸ್, ಯಶೋಧರ ಅನಂತೋಡಿ, ಶಿವಪ್ರಸಾದ್ ಹಾಗೂ ಮೋದಿಜೀ ಅಭಿಮಾನಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.






