Breaking
20 Sep 2026, Sun

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ; ಇಬ್ಬರಿಗೆ ಗಾಯ ಪ್ರಾಣಾಪಾಯದಿಂದ ಪಾರು

ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ.20ರ ಭಾನುವಾರ ಕಾರ್ಕಳದ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್ ಬಳಿ ನಡೆದಿದೆ.


ಅಪಘಾತದಲ್ಲಿ ರಮಾನಾಥ ರೈ ಅವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಅವರ ಕಾರು ಚಾಲಕ ಹಾಗೂ ಆಪ್ತ ಸಹಾಯಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕಾರ್ಕಳ–ಮೂಡುಬಿದಿರೆ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ರಭಸಕ್ಕೆ ಕಾರು ಮತ್ತು ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ. ಘಟನೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.


ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *