ಸುಳ್ಯ: ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಪುಟಾಣಿ ಬುಲ್ ಬುಲ್ ತಂಡ ತೃತೀಯ ಬಹುಮಾನ ಪಡೆದುಕೊಂಡಿದೆ.

ತಂಡದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ತರಬೇತುದಾರರಿಗೂ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.






