Breaking
21 Sep 2026, Mon

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಜಖಂ, ಮದ್ಯದ ಲೋಡ್‌ಗೆ ಹಾನಿ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿಯಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸೆ.20ರ ಮುಂಜಾನೆ ನಡೆದಿದೆ.

ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ಶಮೀರ್ ಎಂಬ ಚಾಲಕ, ನೆಲಮಂಗಲ ನಿವಾಸಿ ರಾಜ ಎಂ. ಅವರಿಗೆ ಸೇರಿದ ಮದ್ಯದ ಲೋಡ್ ತುಂಬಿದ್ದ ಲಾರಿಗೆ ನೆಲ್ಯಾಡಿಯಲ್ಲಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಮದ್ಯದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಮದ್ಯದ ಲೋಡ್ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿದ್ದು, ಮದ್ಯದ ಲೋಡ್‌ಗೂ ಹಾನಿಯಾಗಿದೆ.

ಅಪಘಾತದಲ್ಲಿ ಲಾರಿ ಚಾಲಕರು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಮಾಲಕ ರಾಜ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *