Breaking
22 Sep 2026, Tue

ಧರ್ಮಸ್ಥಳ–ಉಪ್ಪಿನಂಗಡಿ ಮಾರ್ಗದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭ

ಬಂದಾರು/ಮೊಗ್ರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿ ಹಾಗೂ ಸೂಚನೆಯ ಮೇರೆಗೆ ಧರ್ಮಸ್ಥಳ – ಉಜಿರೆ – ಬೆಳಾಲು – ಬಂದಾರು – ಮೊಗ್ರು ಅಲೆಕ್ಕಿ – ಇಳಂತಿಲ ಮಾರ್ಗವಾಗಿ ಉಪ್ಪಿನಂಗಡಿಗೆ ಸಂಪರ್ಕ ಕಲ್ಪಿಸುವ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಗೊಂಡಿದೆ.

ಬೆಳಗ್ಗೆ ಧರ್ಮಸ್ಥಳದಿಂದ ಹೊರಟು ಉಜಿರೆ, ಬೆಳಾಲು, ಬಂದಾರು, ಮೊಗ್ರು ಅಲೆಕ್ಕಿ, ಇಳಂತಿಲ ಮಾರ್ಗವಾಗಿ ಉಪ್ಪಿನಂಗಡಿಗೆ ಬಸ್ ಸಂಚರಿಸಲಿದ್ದು, ಸಂಜೆ ಉಪ್ಪಿನಂಗಡಿಯಿಂದ ಇದೇ ಮಾರ್ಗವಾಗಿ ಧರ್ಮಸ್ಥಳದತ್ತ ಸಂಚರಿಸಲಿದೆ.

ಈ ಬಸ್ ಸೇವೆಯಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಈ ಭಾಗದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ನಿತ್ಯದ ಪ್ರಯಾಣಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಧರ್ಮಸ್ಥಳ ಹಾಗೂ ಉಪ್ಪಿನಂಗಡಿ ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಸರ್ಕಾರಿ ಬಸ್ ಸೇವೆ ಆರಂಭಿಸಬೇಕೆಂಬುದು ಸ್ಥಳೀಯರ ಹಲವು ವರ್ಷಗಳ ಬೇಡಿಕೆಯಾಗಿತ್ತು.

ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಅವರು ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬಸ್ ಸೇವೆ ಆರಂಭಿಸಲು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಲಾಗಿದೆ.

ನೂತನ ಬಸ್ ಸೇವೆಯಿಂದ ಉಜಿರೆ, ಬೆಳಾಲು, ಬಂದಾರು, ಮೊಗ್ರು, ಇಳಂತಿಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬಸ್ ಸೇವೆ ಆರಂಭಗೊಂಡಿರುವುದಕ್ಕೆ ಸ್ಥಳೀಯ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿ ಶಾಸಕ ಹರೀಶ್ ಪೂಂಜ ಹಾಗೂ ಕೆಎಸ್‌ಆರ್‌ಟಿಸಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *