ಮೂಲ್ಕಿ: ಮೂಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಮುಖಂಡರಾಗಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39) ಅವರು ಅನಾರೋಗ್ಯದಿಂದ ಸೆ.22ರಂದು ನಿಧನರಾದರು.

ಕ್ಯಾಟರಿಂಗ್ ಉದ್ಯಮ ನಡೆಸುತ್ತಿದ್ದ ಪ್ರತೀಕ್ ಶೆಟ್ಟಿ ಅವರು ಬಿಜೆಪಿ ಮೂಲ್ಕಿ–ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಮಂಡಲ ಯುವಮೋರ್ಚಾದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ, ಜಿಲ್ಲಾ ಬಿಜೆಪಿ ಯುವಮೋರ್ಚಾದ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಎಕ್ಕಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ತಮ್ಮ ಸಾಮಾಜಿಕ ಸೇವೆಯ ಮೂಲಕ ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು.

ಪ್ರತೀಕ್ ಶೆಟ್ಟಿ ಅವರ ನಿಧನಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.


